ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆ.30ರಂದು ಮಂಗಳೂರಿನಲ್ಲಿ ನಡೆದ ಎಸ್. ಸಿ.ಡಿ.ಸಿ. ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಆಲಂಕಾರು ಪ್ರಾಥಮಿಕ ಕೃಷಿ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ ಭಟ್ ಉಪ್ಪಂಗಳ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್ ಡಿ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೂಟ್ಟು, ಎಸ್. ಬಿ ಜಯರಾಮ ರೈ ಬಳಜ್ಞ, ಮನ್ಮಥ ಎಸ್.ಎನ್, ಕುಶಾಲಪ್ಪ ಗೌಡ ಪೂವಾಜೆ, ಆಲಂಕಾರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು, ಕೇಶವ ಗೌಡ ಆಲಡ್ಕ, ಪದ್ಮಪ್ಪ ಗೌಡ, ಆಶೋಕ ಕೊಯಿಲ, ಉದಯ ಸಾಲಿಯಾನ್, ಆಶೋಕ ಎಚ್, ಲೋಕೇಶ್ ಕಮ್ಮಿತ್ತಿಲು, ಕುಂಞಮುಗೇರ, ಗಾಯತ್ರಿ, ವಿಜಯ ಎಸ್, ರತ್ನಾ ಬಿ.ಕೆ ಮತ್ತಿತರರು ಉಪಸ್ಥಿತರಿದ್ದರು.