ಮಣ್ಣು ಪರೀಕ್ಷೆ ಮಾಡಿಸುವ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ಸಂಸ್ಥೆಯ ಸಿಬ್ಬಂದಿಗಳು ರಾಮಕುಂಜ ಗ್ರಾಮದ ರೈತರ ಮನೆಗೆ ಭೇಟಿ ನೀಡಿ ಮಾಹಿತಿ ನೀಡಿದರು. ಹಾಗೆಯೇ ನಮ್ಮಲ್ಲಿ ಲಭ್ಯವಿರುವ ರಸಗೊಬ್ಬರ ಮತ್ತು ಕೀಟನಾಶಕಗಳ ಬಗ್ಗೆ ಮಾಹಿತಿ ನೀಡಿದರು. ಸದಸ್ಯರು ಇದರ ಸದುಪಯೋಗ ಪಡೆದು ಕೃಷಿ ಅಭಿವೃದ್ಧಿಗೆ ಬೇಕಾದ ಎಲ್ಲಾ ರಸಗೊಬ್ಬರ, ಕೀಟನಾಶಕ ಮತ್ತು ಮೈಲು ತುತ್ತು ಸುಣ್ಣವನ್ನು ನಮ್ಮ ಸಂಸ್ಥೆಯಿಂದಲೇ ಖರೀದಿಸಬೇಕಾಗಿ ಈ ಮೂಲಕ ವಿನಂತಿಸಿದರು.